Acts 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.
Kannada BSI Bible 2016
ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ - ಸತ್ತವರು ಎದ್ದುಬರುವದಿಲ್ಲವೆಂತಲೂ ದೇವದೂತನಾಗಲಿ ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂತಲೂ ಸದ್ದುಕಾಯರು ಹೇಳುವರು; ಆ ಎರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.
Kannada Bible (KNCL) BSI 2016
ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.