Acts 23:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.
Kannada BSI Bible 2016
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.
Kannada Bible (KNCL) BSI 2016
ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.