Acts 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
Kannada BSI Bible 2016
ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.
Kannada Bible (KNCL) BSI 2016
ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.