Acts 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
Kannada BSI Bible 2016
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಾಧಿಪತಿಯು ಪೌಲನಿಗೆ - ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ - ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ.
Kannada Bible (KNCL) BSI 2016
ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.