Acts 24:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
Kannada BSI Bible 2016
ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ನಾನು ಯಾರ ಸಂಗಡವಾದರೂ ವಾದಿಸುವದನ್ನು ಇಲ್ಲವೆ ಜನರ ಗುಂಪು ಕೂಡಿಸುವದನ್ನು ಇವರು ಕಾಣಲಿಲ್ಲ.
Kannada Bible (KNCL) BSI 2016
ನಾನು ದೇವಾಲಯದಲ್ಲಾಗಲಿ, ಪ್ರಾರ್ಥನಾಮಂದಿರದಲ್ಲಾಗಲಿ, ಪಟ್ಟಣದಲ್ಲಾಗಲಿ, ಯಾವ ವಾದವಿವಾದ ನಡೆಸಿದ್ದನ್ನು ಅಥವಾ ಜನರನ್ನು ಪ್ರಚೋದಿಸಿದ್ದನ್ನು ಇವರಾರೂ ಕಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.