Acts 24:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
Kannada BSI Bible 2016
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
Kannada Bible (KNCL) BSI 2016
ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.