Acts 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
Kannada BSI Bible 2016
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.
Kannada Bible (KNCL) BSI 2016
ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.