Acts 24:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನನ್ನು ಸಭೆಗೆ ಕರೆಸಲಾಯಿತು. ಆಗ ತೆರ್ತುಲ್ಲನು ತನ್ನ ಆಪಾದನೆಗಳನ್ನು ಹೊರಿಸಲಾರಂಭಿಸಿದನು: “ಮಹಾರಾಜಶ್ರೀಗಳಾದ ಫೇಲಿಕ್ಸನೇ, ನಿನ್ನ ದೆಸೆಯಿಂದಾಗಿ ನಮ್ಮ ಜನರು ಶಾಂತಿಯಿಂದ ಜೀವಿಸುತ್ತಿದ್ದಾರೆ. ನಿನ್ನ ವಿವೇಕದ ಸಹಾಯದಿಂದ ನಮ್ಮ ದೇಶದ ಅನೇಕ ದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ
Kannada BSI Bible 2016
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನನ್ನು ಕರೆಯಿಸಿದ ನಂತರ ತೆರ್ತುಲ್ಲನು ಅವನ ಮೇಲೆ ತಪ್ಪುಹೊರಿಸುವದಕ್ಕೆ ಪ್ರಾರಂಭಿಸಿ ಹೀಗಂದನು - ಶ್ರೀಮತ್ ಮಹಾ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ ಎಲ್ಲಾ ಸ್ಥಳದಲ್ಲಿಯೂ
Kannada Bible (KNCL) BSI 2016
ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.