Acts 24:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
Kannada BSI Bible 2016
ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವರ ನಡುವೆ ನಿಂತು - ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದ್ದನ್ನೇ ಹೊರತು ಬೇರೆ ಏನೂ ಹೇಳಲಾರರು ಅಂದನು.
Kannada Bible (KNCL) BSI 2016
‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.