Acts 24:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.
Kannada BSI Bible 2016
ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.
Kannada Bible (KNCL) BSI 2016
ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.