Acts 24:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
Kannada BSI Bible 2016
ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.
Kannada Bible (KNCL) BSI 2016
ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.