Acts 24:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.