Acts 24:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.
Kannada BSI Bible 2016
ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು.
Kannada Bible (KNCL) BSI 2016
ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.