Acts 24:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.
Kannada BSI Bible 2016
ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ದಯೆಯಿಂದ ಲಾಲಿಸಬೇಕೆಂದು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ನಾನು ತಮ್ಮ ಸಮಯವನ್ನು ವ್ಯರ್ಥಮಾಡಲು ಇಚ್ಛಿಸುವುದಿಲ್ಲ. ಸಂಕ್ಷಿಪ್ತವಾಗಿ ನಾನು ತಮ್ಮ ಮುಂದಿಡುವ ಈ ವಾದವನ್ನು ದಯೆಯಿಂದ ಆಲಿಸಬೇಕೆಂದು ವಿಜ್ಞಾಪಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.