Acts 24:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
Kannada BSI Bible 2016
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.
Kannada Bible (KNCL) BSI 2016
ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.