Acts 25:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
Kannada BSI Bible 2016
ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
Kannada Bible (KNCL) BSI 2016
ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.