Acts 25:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
Kannada BSI Bible 2016
ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅನೇಕ ದಿವಸ ಅಲ್ಲಿ ನಿಂತಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ - ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
Kannada Bible (KNCL) BSI 2016
ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.