Acts 25:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
Kannada BSI Bible 2016
ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು.
Kannada Bible (KNCL) BSI 2016
ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.