Acts 25:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
Kannada BSI Bible 2016
ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೋ ನನಗೆ ತೋರದೆ - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಲು
Kannada Bible (KNCL) BSI 2016
ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು.