Acts 25:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಅವನು, ‘ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು’ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
Kannada BSI Bible 2016
ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು.