Acts 25:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
Kannada BSI Bible 2016
ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅಗ್ರಿಪ್ಪನು - ಆ ಮನುಷ್ಯನು ಹೇಳಿಕೊಳ್ಳುವದನ್ನು ಕೇಳುವದಕ್ಕೆ ನನಗೂ ಮನಸ್ಸದೆ ಎಂದು ಹೇಳಲು ಫೆಸ್ತನು - ನಾಳೆ ಕೇಳಬಹುದು ಅಂದನು.
Kannada Bible (KNCL) BSI 2016
ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು.