Acts 25:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
Kannada BSI Bible 2016
ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.
Kannada Bible (KNCL) BSI 2016
ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.