Acts 25:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
Kannada BSI Bible 2016
ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ವಿಷಯದಲ್ಲಿ ಮಹಾಸನ್ನಿಧಾನಕ್ಕೆ ಬರೆಯುವದಕ್ಕೆ ನಿಶ್ಚಯವಾದದ್ದೇನೂ ಇಲ್ಲ. ಸೆರೆಯವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
Kannada Bible (KNCL) BSI 2016
ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.