Acts 25:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.
Kannada BSI Bible 2016
ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.
Kannada Bible (KNCL) BSI 2016
ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.