Acts 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
Kannada BSI Bible 2016
ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು
Kannada Bible (KNCL) BSI 2016
ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.