Acts 26:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
Kannada BSI Bible 2016
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.
Kannada Bible (KNCL) BSI 2016
ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.