Acts 26:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
Kannada BSI Bible 2016
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು.
Kannada Bible (KNCL) BSI 2016
ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.