Acts 26:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
Kannada BSI Bible 2016
ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
Kannada Bible (KNCL) BSI 2016
“ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.