Acts 26:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
Kannada BSI Bible 2016
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.
Kannada Bible (KNCL) BSI 2016
ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.