Acts 26:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.
Kannada BSI Bible 2016
ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ? ಉಂಟೆಂದು ಬಲ್ಲೆನು ಅಂದನು.
Kannada Bible (KNCL) BSI 2016
ಅಗ್ರಿಪ್ಪ ರಾಜರೇ, ತಮಗೆ ಪ್ರವಾದಿಗಳಲ್ಲಿ ನಂಬಿಕೆಯುಂಟೋ? ಉಂಟೆಂದು ನಾನು ಬಲ್ಲೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು.