Acts 26:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
Kannada BSI Bible 2016
ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.