Acts 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
Kannada BSI Bible 2016
ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡಕೊಂಡೆನೆಂದು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿಹೇಳುವದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
Kannada Bible (KNCL) BSI 2016
ನಮ್ಮ ಧರ್ಮದ ಅತಿ ಕಟ್ಟುನಿಟ್ಟಾದ ಪಂಥವೆಂದರೆ ಫರಿಸಾಯಪಂಥ. ಅದರ ಅನುಯಾಯಿ ಆಗಿದ್ದೆ ನಾನು. ಇದನ್ನು ಮೊದಲಿನಿಂದ ಅರಿತಿರುವ ಅವರೇ ಮನಸ್ಸುಮಾಡಿದರೆ ಸಾಕ್ಷಿಹೇಳಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.