Acts 26:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
Kannada BSI Bible 2016
ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.
Kannada Bible (KNCL) BSI 2016
ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.