Acts 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
Kannada BSI Bible 2016
ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
Kannada Bible (KNCL) BSI 2016
ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.