Acts 27:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
Kannada BSI Bible 2016
ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
Kannada Bible (KNCL) BSI 2016
ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.