Acts 27:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ‘ಕಾವ್ದ’ ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
Kannada BSI Bible 2016
ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು.
Kannada Bible (KNCL) BSI 2016
ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳಲು ಸಾಧ್ಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.