Acts 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ ‘ಸರ್ತಿಸ್’ ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
Kannada BSI Bible 2016
ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಮೇಲಕ್ಕೆ ಎತ್ತಿದ ತರುವಾಯ ಹೊರಜಿಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆಮೇಲೆ ಸುರ್ತಿಸ್ ಎಂಬ ಕಳ್ಳುಸುಬಿನಲ್ಲಿ ಸಿಕ್ಕಿಬಿದ್ದೇವೆಂದು ಭಯಪಟ್ಟು ಹಾಯಿಯನ್ನು ಸಡಿಲುಮಾಡಿ ನೂಕಿಸಿಕೊಂಡು ಹೋದೆವು.
Kannada Bible (KNCL) BSI 2016
ಹಡಗಿನವರು ಅದನ್ನು ಮೇಲಕ್ಕೆ ಎಳೆದು ಹಗ್ಗಗಳಿಂದ ಹಡಗಿನ ಅಡಿಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಅನಂತರ ‘ಸುರ್ತಿಸ್’ ಎಂಬ ಉಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.