Acts 27:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
Kannada BSI Bible 2016
ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
Kannada Bible (KNCL) BSI 2016
ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.