Acts 27:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
Kannada BSI Bible 2016
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕ ದಿವಸಗಳ ತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ಅಂದಿನಿಂದ ಕಳೆದುಹೋಯಿತು.
Kannada Bible (KNCL) BSI 2016
ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.