Acts 27:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
Kannada BSI Bible 2016
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.
Kannada Bible (KNCL) BSI 2016
‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.