Acts 27:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
Kannada BSI Bible 2016
ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ ಅಳತೇ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರಿಗಿ ಅಳತೇ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
Kannada Bible (KNCL) BSI 2016
ನೀರಿನ ಆಳವನ್ನು ಪರೀಕ್ಷಿಸಿದಾಗ ಅದು ನಾಲ್ವತ್ತು ಮೀಟರು ಇರುವುದಾಗಿ ತಿಳಿಯಿತು. ಇನ್ನೂ ಸ್ವಲ್ಪ ಮುಂದಕ್ಕೆ ಸಾಗಿ ಮತ್ತೆ ಆಳ ನೋಡಿದಾಗ ಮೂವತ್ತು ಮೀಟರು ಎಂದು ತಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.