Acts 27:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
Kannada BSI Bible 2016
ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು.
Kannada Bible (KNCL) BSI 2016
ನಮ್ಮ ಹಡಗು ಕಲ್ಲುಬಂಡೆಗಳನ್ನು ತಾಕಬಹುದೆಂಬ ದಿಗಿಲು ಉಂಟಾಯಿತು. ಆದುದರಿಂದ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ ಬೆಳಗಾಗಲೆಂದು ಹಾರೈಸಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.