Acts 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
Kannada BSI Bible 2016
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.
Kannada Bible (KNCL) BSI 2016
ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.