Acts 27:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
Kannada BSI Bible 2016
ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವಿಕರು ಮುಂಭಾಗದಲ್ಲಿ ಲಂಗರಗಳನ್ನು ಹಾಕಬೇಕೆಂಬುವ ನೆವದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವದಕ್ಕೆ ಪ್ರಯತ್ನಿಸುತ್ತಿರುವಾಗ
Kannada Bible (KNCL) BSI 2016
ಅನಂತರ ನಾವಿಕರು ಹಡಗಿನ ಮುಂಭಾಗದಲ್ಲಿ ಕೆಲವು ಲಂಗರುಗಳನ್ನು ಹಾಕುವಂತೆ ನಟಿಸಿ, ದೋಣಿಯನ್ನು ನೀರಿಗಿಳಿಸಿ, ಹಡಗನ್ನು ಬಿಟ್ಟು ಪಲಾಯನ ಮಾಡಬೇಕೆಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.