Acts 27:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.
Kannada BSI Bible 2016
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.
Kannada Bible (KNCL) BSI 2016
ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.