Acts 27:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
Kannada BSI Bible 2016
ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ
Kannada Bible (KNCL) BSI 2016
ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.