Acts 27:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
Kannada Bible (KNCL) BSI 2016
ಹೀಗೆ ಹೇಳಿದ ಮೇಲೆ ಪೌಲನು ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಅದನ್ನು ಮುರಿದು ತಿನ್ನಲಾರಂಭಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.