Acts 27:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
Kannada BSI Bible 2016
ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಲಂಗರಗಳನ್ನು ಸರಿದು ಸಮುದ್ರದಲ್ಲೇ ಬಿಟ್ಟು ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
Kannada Bible (KNCL) BSI 2016
ಎಂದೇ ಹಗ್ಗಗಳನ್ನು ಕತ್ತರಿಸಿ ಲಂಗರುಗಳನ್ನು ಸಮುದ್ರದಲ್ಲೇ ಮುಳುಗಲೆಂದು ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಲಾದ ಹಗ್ಗಗಳನ್ನು ಬಿಚ್ಚಿದರು. ಅನಂತರ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ಚಲಿಸಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.