Acts 27:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
Kannada BSI Bible 2016
ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು.
Kannada Bible (KNCL) BSI 2016
ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.