Acts 27:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
Kannada BSI Bible 2016
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ
Kannada Bible (KNCL) BSI 2016
ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.